Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:16 - ಕನ್ನಡ ಸತ್ಯವೇದವು J.V. (BSI)

16 ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಆಮೇಲೆ ಮಕೆದೋನ್ಯವನ್ನು ಬಿಟ್ಟು ತಿರಿಗಿ ನಿಮ್ಮ ಬಳಿಗೆ ಬಂದು ನಿವ್ಮಿುಂದ ಯೂದಾಯಕ್ಕೆ ಸಾಗಕಳುಹಿಸಲ್ಪಡಬೇಕೆಂದು ಯೋಚಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಮಟ್ಲ್ಯಾರ್ ಮೆಸಿದೊನಿಯಾಕ್ ಜಾತಾನಾ ಅನಿ ಮಾನಾ ಥೈತ್ನಾ ಫಾಟಿ ಪರ್ತುನ್ ಯೆತಾನಾಬಿ ತುಮ್ಚ್ಯಾಕ್ಡೆ ಯೆವ್ಚೆ ಅನಿ ಮಾನಾ ಮಾಜ್ಯಾ ವಾಟೆಕ್ ಗರಜ್ ಅಸಲ್ಲೆ ದಿವ್ನ್ ತುಮಿಚ್ ಮಾಕಾ ಜುದೆಯಾಕ್ ಧಾಡ್ತಲೆ ಮನುನ್ ಮಿಯಾ ಯವ್ಜುನ್ ಘೆಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:16
6 ತಿಳಿವುಗಳ ಹೋಲಿಕೆ  

ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಆದದರಿಂದ ಯಾರೂ ಅವನನ್ನು ಹೀನೈಸಬಾರದು. ಮತ್ತು ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ಎದುರುನೋಡುತ್ತಾ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು