2 ಕೊರಿಂಥದವರಿಗೆ 1:17 - ಕನ್ನಡ ಸತ್ಯವೇದವು J.V. (BSI)17 ಇದನ್ನು ಯೋಚಿಸಿದಾಗ ಚಪಲಚಿತ್ತನಾಗಿದ್ದೆನೋ? ನಾನು ಯೋಚಿಸುವದನ್ನು ಕೇವಲ ಮಾನುಷಬುದ್ಧಿಯಿಂದ ಯೋಚಿಸಿ ಹೌದು ಹೌದು ಅಂದ ಮೇಲೆ ಅಲ್ಲ ಅಲ್ಲ ಅನ್ನುವವನಾಗಿದ್ದೇನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಶೆ ಕರುನ್ ಯವ್ಜಲ್ಲ್ಯಾ ತನ್ನಾ ಮಿಯಾ ಚಂಚಲ್ ಮನಾಚೊ ಮನುನ್ ಹೊಲೆ ಕಾಯ್? ಮಾಜಿ ಯವ್ಜನಿಯಾ ಮಜ್ಯಾ ಗರುಕಿನ್ ಯೆಲಾತ್ ಮನುನ್ ಹೊಲೆ ಕಾಯ್? ಎಗ್ದಾ ಹೊಯ್ - ಹೊಯ್ ಮಟಲ್ಲೆ ತನ್ನಾಚ್ ಮಿಯಾ “ನ್ಹಯ್ - ನ್ಹಯ್” ಮಟ್ಲೊ ಕಾಯ್? ಅಧ್ಯಾಯವನ್ನು ನೋಡಿ |