2 ಕೊರಿಂಥದವರಿಗೆ 1:20 - ಕನ್ನಡ ಸತ್ಯವೇದವು J.V. (BSI)20 ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲೇ ದೃಢವಾಗುತ್ತವೆ. ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ದೆವಾನ್ ದಿಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಬಿ ತೆಚೆ ವೈನಾ ಹೊಯ್ ಹೊಲ್ಯಾತ್. .ತಸೆ ಮನುನುಚ್ ದೆವಾಚಿ ಸುತ್ತಿ ಕರ್‍ತಾನಾ ತೆಚೆ ವೈನಾ ಅಮಿ “ತಸೆಚ್ ಹೊಂವ್ದಿ” ಮನ್ತಾಂವ್. ಅಧ್ಯಾಯವನ್ನು ನೋಡಿ |
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.