Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:23 - ಕನ್ನಡ ಸತ್ಯವೇದವು J.V. (BSI)

23 ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾಜ್ಯಾ ಜಿವಾಚ್ಯಾನ್ ಮಿಯಾ ಸಾಂಗ್ತಾ ಅನಿ ದೆವುಚ್ ಹೆಕಾ ಸಾಕ್ಷಿ, ತುಮ್ಚ್ಯಾ ಮದ್ದಿ ಯೆವ್ನ್ ಕಠೊರ್‌ಪಾನ್ ದಾಕ್ವುಚೆ ಮನುನ್ ನ್ಹಯ್ ಮನುನ್ ಚಿಂತುನ್ ಕೊರಿಂಥಾಕ್ ಮಿಯಾ ಯೆವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:23
22 ತಿಳಿವುಗಳ ಹೋಲಿಕೆ  

ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬದಕ್ಕೆ ಇಗೋ ದೇವರೇ ಸಾಕ್ಷಿ.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.


ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.


ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರಭಾವವು ನಾಶವಾಗಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು