2 ಕೊರಿಂಥದವರಿಗೆ 1:24 - ಕನ್ನಡ ಸತ್ಯವೇದವು J.V. (BSI)24 ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತುಮ್ಚ್ಯಾ ವಿಶ್ವಾಸಾಚ್ಯಾ ವೈರ್ ಅಧಿಕಾರ್ ಚಾಲ್ವುಚೆ ಮನ್ತಲಿ ಅಮ್ಚಿ ಆಶಾ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ವಿಶ್ವಾಸಾತ್ ತುಮಿ ಘಟ್ ಹಾಸಿ, ತುಮ್ಚಿ ಕುಶಿ ಜಾಸ್ತಿ ಕರುಸಾಟ್ನಿ ತುಮ್ಚ್ಯಾ ವಾಂಗ್ಡಾ ಕಾಮ್ ಕರುಕ್ ಅಮ್ಕಾ ಲೈ ಮನ್ ಹಾಯ್. ಅಧ್ಯಾಯವನ್ನು ನೋಡಿ |