Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:1 - ಕನ್ನಡ ಸತ್ಯವೇದವು J.V. (BSI)

1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು ಕ್ರಿಸ್ತಾಚ್ಯಾ ಶಾಂತ್ಪಾನಾನ್ ಅನಿ ಬೊಳೆಪಾನಾನ್ ತುಮ್ಚ್ಯಾಕ್ಡೆ ಎಕ್ ವಯಕ್ತಿಕ್ ಉಪ್ಕಾರ್ ಮಾಗ್ತಾ, .ಮಿಯಾ ತುಮಿ ಸಾಂಗ್ತ್ಯಾಶಿ ತಶೆ, ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಭಿವಲ್ಲೊ ಖರೆ ತುಮ್ಚ್ಯಾಕ್ನಾ ಧುರ್ ರ್‍ಹಾತಾನಾ ಖಟೊರ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:1
38 ತಿಳಿವುಗಳ ಹೋಲಿಕೆ  

ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ನೋಡಿರಿ, ಪೌಲನೆಂಬ ನಾನು ನಿಮಗೆ ಒಂದನ್ನು ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.


ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ ಭಯಪಡುವವನೂ ಬಹು ನಡುಗುವವನೂ ಆಗಿದ್ದೆನು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ಸರ್ತಿ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.


ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳಪಡುವದಿಲ್ಲ.


ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು