Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:13 - ಕನ್ನಡ ಸತ್ಯವೇದವು J.V. (BSI)

13 ನಾವಾದರೋ ಮೇರೆದಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ನೇವಿುಸಿದಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅಮಿ ಅಮ್ಚಿ ಗಡ್ ಉತ್ರುನ್ ಅಮ್ಚೆಚ್ ಮೊಟೆಪಾನ್ ಬೊಲಿನಾವ್. ದೆವಾನುಚ್ ಅಮ್ಚ್ಯಾ ಕಾಮಾಕ್ ಘಾಟಲ್ಲಿ ಗಡ್ ಹಾಯ್ ಅನಿ ತುಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:13
12 ತಿಳಿವುಗಳ ಹೋಲಿಕೆ  

ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ನೆನಸಿ ಇತರರು ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ಸುವಾರ್ತೆಯನ್ನು ಪ್ರಕಟಿಸುವದಿಲ್ಲವೆಂಬದಾಗಿ ನಿಷ್ಕರ್ಷೆಮಾಡಿಕೊಂಡೆನು.


ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಆದರೆ ಕ್ರಿಸ್ತನು ನಮ್ಮಲ್ಲಿ ಒಬ್ಬೊಬ್ಬನಿಗೆ ಅನುಗ್ರಹಿಸಿದ ಪ್ರಕಾರವೇ ಅವನವನಿಗೆ ಕೃಪಾವರವು ದೊರಕಿದೆ.


ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು