Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:18 - ಕನ್ನಡ ಸತ್ಯವೇದವು J.V. (BSI)

18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್ ಅಪ್ನಾಚಿಚ್ ಬಡಾಯ್ ಬೊಲ್ತಾ ತೊ ನ್ಹಯ್, ಕೊನಾಚೆ ಮೊಟೆಪಾನ್ ಧನಿ ಸಾಂಗ್ತಾ ತೊ ಮಾನುಸ್ ಯೊಗ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:18
21 ತಿಳಿವುಗಳ ಹೋಲಿಕೆ  

ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿಕೊಳ್ಳುವದಕ್ಕಾಗಲಿ ನಮಗೆ ಧೈರ್ಯಸಾಲದು; ಅವರಂತೂ ತಮ್ಮ ತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.


ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹಿಗ್ಗದೆ ತೋರಿಕೆಯ ವಿಷಯದಲ್ಲಿ ಮಾತ್ರ ಹಿಗ್ಗುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳುವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯದಲ್ಲಿ ಹಿಗ್ಗುವದಕ್ಕೆ ನಿಮಗೆ ಆಸ್ಪದಕೊಡುತ್ತೇವೆ.


ನಾವೇ ನಮ್ಮನ್ನು ತಿರಿಗಿ ಹೊಗಳಿಕೊಳ್ಳುವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿವ್ಮಿುಂದ ಪಡಕೊಳ್ಳಬೇಕೋ?


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು