Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:2 - ಕನ್ನಡ ಸತ್ಯವೇದವು J.V. (BSI)

2 ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ಲೌಕಿಕರಂತೆ ಜೀವಿಸುತ್ತೇವೆಂದು ಕೆಲವರು ಯೋಚಿಸುತ್ತಾರೆ. ನಾನು ಬಂದಾಗ ಅವರ ವಿರೋಧವಾಗಿ ಬಹು ದಿಟ್ಟತನದಿಂದಿರಬೇಕೆಂದು ಯೋಚಿಸಿಕೊಂಡಿದ್ದೇನೆ. ಆದರೆ ನಿಮಗೂ ಅದೇ ದಿಟ್ಟತನವನ್ನು ಉಪಯೋಗಿಸುವ ಅಗತ್ಯತೆ ಇಲ್ಲದಿರಲಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಜಗಾಚ್ಯಾ ಪರ್ಕಾರ್ ಅಮಿ ಚಲ್ತಾಂವ್ ಮನುನ್ ಮನ್ತಲ್ಯಾಕ್, ಕಸ್ಲೊ ಮನುನ್ ದಾಕ್ವುಚೆ ಮನುನ್ ಮಿಯಾ ಚಿಂತ್ಲಾ . ಖರೆ ತುಮ್ಚ್ಯಾ ಮದ್ದಿ ಮಿಯಾ ಯೆತಾನಾ ಮಿಯಾ ಖಟೊರ್ ರಿತಿನ್ ಬೊಲ್ತಲೊ ಅವಕಾಸ್ ತುಮ್ಚ್ಯಾ ವೈನಾ ಮಾಕಾ ಗಾವಿನಸ್ತಾನಾ ರ್‍ಹಾಂವ್ದಿತ್ ಮನುನ್ ಮಿಯಾ ಮಾಗ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:2
12 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.


ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ಇದನ್ನು ಯೋಚಿಸಿದಾಗ ಚಪಲಚಿತ್ತನಾಗಿದ್ದೆನೋ? ನಾನು ಯೋಚಿಸುವದನ್ನು ಕೇವಲ ಮಾನುಷಬುದ್ಧಿಯಿಂದ ಯೋಚಿಸಿ ಹೌದು ಹೌದು ಅಂದ ಮೇಲೆ ಅಲ್ಲ ಅಲ್ಲ ಅನ್ನುವವನಾಗಿದ್ದೇನೋ?


ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು