Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:5 - ಕನ್ನಡ ಸತ್ಯವೇದವು J.V. (BSI)

5 ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾಚ್ಯಾ ಶಾನ್ಪಾನಾಚ್ಯಾ ವಿರೊದ್ ಭಾಂದಲ್ಲ್ಯಾ ಗರುಕಿಚ್ಯಾ ಭಿತ್ತಿಯಾ ಅಮಿ ಕೊಸ್ಳುನ್ ಘಾಲ್ತಾವ್; ಮಾನ್ಸಾಚ್ಯಾ ಸಗ್ಳ್ಯಾ ಕಲ್ಪನ್ಯಾಕ್ನಿ ಘಟ್ ಧರುನ್ ಅಮಿ ಕ್ರಿಸ್ತಾಕ್ ಖಾಲ್ತಿ ಹೊಯ್ ಸರ್ಕೆ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:5
48 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;


ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.


ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.


ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಆತನು ತನ್ನ ಭುಜಪರಾಕ್ರಮವನ್ನು ತೋರಿಸಿ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ದೀನರನ್ನು ಉದ್ಧರಿಸುವವನೂ ಹವ್ಮಿುನ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು