Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:16 - ಕನ್ನಡ ಸತ್ಯವೇದವು J.V. (BSI)

16 ನನ್ನನ್ನು ಬುದ್ಧಿಹೀನನೆಂತ ಯಾರೂ ನೆನಸಬಾರದೆಂದು ತಿರಿಗಿ ಹೇಳುತ್ತೇನೆ; ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪಸ್ವಲ್ಪ ಹೊಗಳಿಕೊಳ್ಳಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನನ್ನು ಯಾರೂ ಹುಚ್ಚನೆಂದು ಭಾವಿಸದಿರಲಿ, ಎಂದು ಮತ್ತೆ ಹೇಳುತ್ತೇನೆ. ಒಂದು ವೇಳೆ ಹಾಗೆ ಭಾವಿಸಿದರೂ ಚಿಂತೆಯಿಲ್ಲ. ನನ್ನನ್ನು ಹುಚ್ಚನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಮತ್ತೆ ಹೇಳುವುದೇನೆಂದರೆ, ನನ್ನನ್ನು ಬುದ್ಧಿಹೀನನೆಂದು ಯಾರೂ ಯೋಚಿಸಕೂಡದು. ಬುದ್ಧಿಹೀನನೆಂದು ನೀವು ಯೋಚಿಸುವುದಾಗಿದ್ದರೆ, ನೀವು ಬದ್ಧಿಹೀನನನ್ನು ಸ್ವೀಕರಿಸಿಕೊಳ್ಳುವಂತೆ ನನ್ನನ್ನು ಸ್ವೀಕರಿಸಿಕೊಳ್ಳಿರಿ. ಆಗ ನಾನು ಸ್ವಲ್ಪ ಹೆಮ್ಮೆಪಡಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಬುದ್ಧಿಹೀನನೆಂದು ಯಾರೂ ನೆನಸಬಾರದೆಂದು ನಾನು ತಿರುಗಿ ಹೇಳುತ್ತೇನೆ. ಒಂದು ವೇಳೆ ಹಾಗೆ ನೆನಸಿದರೆ, ನೀವು ಬುದ್ಧಿಹೀನರನ್ನು ಸ್ವೀಕರಿಸುವಂತೆಯೇ, ನನ್ನನ್ನೂ ಸ್ವೀಕರಿಸಿರಿ. ಆಗ ನನ್ನನ್ನು ನಾನೇ ಪ್ರಶಂಶಿಸಿಕೊಳ್ಳಲು ನನಗೆ ಆಸ್ಪದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಅನಿ ಎಗ್ದಾ ಸಾಂಗ್ತಾ; ಮಿಯಾ ಪಿಸೊ ಮನುನ್ ಕೊನ್ ಬಿ ಚಿಂತ್ತಲೆ ನಕ್ಕೊ. ಖರೆ ತಸೆ ತುಮಿ ಚಿಂತ್ತ್ಯಾಶಿ ಹೊಲ್ಯಾರ್ ಮಿಯಾ ಪಿಸೊಚ್ ಮನುನ್ ಚಿಂತ್ತಾ ಅನಿ ಮಾಜೆ ಪಿಶೆಪಾನ್ ಉಲ್ಲೆ ಆಯ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:16
7 ತಿಳಿವುಗಳ ಹೋಲಿಕೆ  

ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.


ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ.


ಹೊಗಳಿಕೊಳ್ಳುವದು ವಿಹಿತವಲ್ಲದಿದ್ದರೂ ಅದು ನನಗೆ ಅವಶ್ಯವಾಗಿದೆ. ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನು ಕುರಿತೂ ತಿಳಿಯಪಡಿಸಿದ ರಹಸ್ಯಗಳನ್ನು ಕುರಿತೂ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು