Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:22 - ಕನ್ನಡ ಸತ್ಯವೇದವು J.V. (BSI)

22 ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಹೀಬ್ರಿಯರೋ? ನಾನೂ ಹೀಬ್ರಿಯನೇ. ಅವರು ಇಸ್ರಾಯೇಲರೋ? ನಾನೂ ಇಸ್ರಾಯೇಲನೇ. ಅವರು ಅಬ್ರಹಾಮನ ಸಂತತಿಯವರೋ? ನಾನೂ ಕೂಡಾ ಅಬ್ರಹಾಮನ ಸಂತತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆನಿ ಜುದೆವಾ? ಮಿಯಾಬಿ ಜುದೆವ್! ತೆನಿ ಇಸ್ರಾಯೆಲ್ಕಾರಾ? ಮಿಯಾಬಿ ಇಸ್ರಾಯೆಲ್ಕಾರ್! ತೆನಿ ಅಬ್ರಾಹಾಮಾಚ್ಯಾ ಪಿಳ್ಗಿಚೆ? ಮಿಯಾಬಿ ಅಬ್ರಾಮಾಚ್ಯಾಚ್ ಪಿಳ್ಗಿಚೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:22
17 ತಿಳಿವುಗಳ ಹೋಲಿಕೆ  

ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬದಾಗಿ ಹೇಳಿದ್ದಾನಷ್ಟೆ.


ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು