2 ಕೊರಿಂಥದವರಿಗೆ 11:26 - ಕನ್ನಡ ಸತ್ಯವೇದವು J.V. (BSI)26 ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕವ್ಡ್ಯಾಕಿ ಮಾಜ್ಯಾ ಪ್ರವಾಸಾತ್ನಿ ಮಾಜ್ಯಾ ವರ್‍ತಿ ಯೆಲ್ಲೆ ಅಪಾಯ್ ಕವ್ಡೆ ಮನುನ್ ಮಿಯಾ ಸಾಂಗುಚೆ! ಪಾನಿ ಭರುನ್ ಯೆಲ್ಲೆ ಅಪಾಯ್, ಚೊರಾಂಚೆ ಅಪಾಯ್, ಮಾಜ್ಯಾಚ್ ದೆಸಾಚ್ಯಾ ಲೊಕಾನಿಕ್ನಾ ಅಪಾಯ್, ಡಂಗ್ಳಿಯಾತ್ನಿ ಅಪಾಯ್, ಸಮುಂದರಾತ್ ಅಪಾಯ್, ಘಾತ್ಕಿ ಭಾವಾ ಅನಿ ಭೆನಿಯಾಂಚೊ ಅಪಾಯ್, ಶಾರಾತ್ನಿ ಅಪಾಯ್. ಅಧ್ಯಾಯವನ್ನು ನೋಡಿ |