Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:6 - ಕನ್ನಡ ಸತ್ಯವೇದವು J.V. (BSI)

6 ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ತರಬೇತಿ ಹೊಂದಿದ ಭಾಷಣಗಾರನಲ್ಲ ಎಂಬುದೇನೊ ನಿಜ, ಆದರೆ ನನಗೂ ಜ್ಞಾನವಿದೆ. ಇದನ್ನು ನಿಮಗೆ ಪ್ರತಿಯೊಂದು ವಿಧದಲ್ಲಿಯೂ ಸ್ಪಷ್ಟವಾಗಿ ತೋರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಎಕ್ ಮೊಟೊ ಪ್ರಚಾರ್ ಕರ್‍ತಲೊ ಹೊವುಕ್ನಾ ಅಸಿಲ್; ಖರೆ ಶಾನ್‍ಪಾನಾನ್ ಮಿಯಾ ಕಾಯ್ ಕಮಿ? ಸಗ್ಳ್ಯಾ ವಿಶಯಾತ್ನಿ ನಾ ಹೊಲ್ಯಾರ್ ಎಳಾತ್ನಿ ಮಿಯಾ ಕಸ್ಲೊ ಮನುನ್ ತುಮ್ಕಾ ಖರೆ ಕರುನ್ ದಾಕ್ವುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:6
13 ತಿಳಿವುಗಳ ಹೋಲಿಕೆ  

ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವದರಲ್ಲಿಯೂ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ತೋರಿದವು.


ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಇವುಗಳನ್ನು ಮಾನುಷಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ದೇವರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಸಂಬಂಧವಾದವುಗಳನ್ನು ಆತ್ಮನಿಗೆ ಯುಕ್ತವಾದ ರೀತಿಯಲ್ಲಿ ವಿವರಿಸುತ್ತೇವೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು