2 ಕೊರಿಂಥದವರಿಗೆ 11:9 - ಕನ್ನಡ ಸತ್ಯವೇದವು J.V. (BSI)9 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ. ಅಧ್ಯಾಯವನ್ನು ನೋಡಿ |