Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:16 - ಕನ್ನಡ ಸತ್ಯವೇದವು J.V. (BSI)

16 ಒಂದು ವೇಳೆ ನೀವು - ಅದಿರಲಿ, ತಾನು ನಮಗೆ ಭಾರವಾಗದೆ ಹೋದರೂ ಯುಕ್ತಿಯುಳ್ಳವನಾಗಿದ್ದು ನಮ್ಮನ್ನು ಉಪಾಯದಿಂದ ಸುಲುಕೊಂಡನೆಂದು ಹೇಳೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹೀಗಿರಲು, ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ನಾ ತೆ ಖರೆ ಹಾಯ್, ಜಾಲ್ಯಾರ್ ಬಿ ಶಾನೆಪಾನಾನ್ ಮಿಯಾ ತುಮ್ಕಾ ಶಿರ್ಕುನ್ ಘಾಟ್ಲಾ ಮನುನ್ ಮನ್ಸಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:16
11 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ಯಾಕಂದರೆ ನಮ್ಮ ಬೋಧನೆಯು ಅಬದ್ಧವಲ್ಲ, ಅಶುದ್ಧವಲ್ಲ, ಮೋಸವಲ್ಲ; ದೇವರು ನಮ್ಮನ್ನು ಯೋಗ್ಯರೆಂದೆಣಿಸಿ


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯದಲ್ಲಿಯೂ ನಿಮ್ಮನ್ನು ವಿುಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ. ನಾನು ಮಾಡಿದ ಈ ಅನ್ಯಾಯವನ್ನು ಕ್ಷವಿುಸಿರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನೀವು ಜೀವವುಳ್ಳ ಕಲ್ಲಾಗಿರುವ ಆತನನ್ನು ಸೇರಿಕೊಂಡಿದ್ದೀರಿ.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು