Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:18 - ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಬಳಿಗೆ ಹೋಗುವದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನಷ್ಟೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ; ನಾವಿಬ್ಬರೂ ಒಬ್ಬ ಆತ್ಮನಿಂದಲೇ ಪ್ರೇರಿತರಾಗಿ ಒಂದೇ ಹೆಜ್ಜೆಜಾಡಿನಲ್ಲಿ ನಡೆಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಚ್ಯಾಕ್ಡೆ ಯೆವ್ಕ್ ಮಿಯಾ ತಿತಾಕ್ ಸಾಂಗಲ್ಲೊ ಅನಿ ತೆಚ್ಯಾ ವಾಂಗ್ಡಾ ಅನಿಎಕ್ ಭಾವಾಕ್ ಮಿಯಾ ಧಾಡಲ್ಲೊ. ತಿತಾನ್ ತುಮ್ಚೊ ಕಾಯ್ ಫಾಯ್ದೊ ಘೆಟ್ಲ್ಯಾನ್? ತೊ ಅನಿ ಮಿಯಾ ಎಕುಚ್ ಮನಾನ್ ಚಲುಕ್‌ನಾವ್ ಕಾಯ್? ಅಮ್ಚಿ ಚಾಲ್ ಕಾಯ್ ಎಕುಚ್ ನಮುನ್ಯಾಚಿ ಹೊವ್ಕ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:18
13 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.


ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇವಿುಸಿದಂದಿನಿಂದ ಹನ್ನೆರಡು ವರುಷಗಳವರೆಗೆ ಅಂದರೆ ಅವನ ಆಳಿಕೆಯ ಇಪ್ಪತ್ತನೆಯ ವರುಷದಿಂದ ಮೂವತ್ತೆರಡನೆಯ ವರುಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಆಯದಿಂದ ಜೀವನಮಾಡಲಿಲ್ಲ.


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು