Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:2 - ಕನ್ನಡ ಸತ್ಯವೇದವು J.V. (BSI)

2 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಸಲ್ಲ್ಯಾ ಎಕ್ ಮಾನ್ಸಾಕ್ ಮಿಯಾ ವಳಕ್ತಾ ಚೆವ್ದಾ ವರ್ಸಾಂಚ್ಯಾ ಅದ್ದಿ ತೆಕಾ ತಿನ್ವ್ಯಾ ಸರ್‍ಗಾರ್ ವೊಡುನ್ ಘೆವ್ನ್ ಹೊಲ್ಲೆ. ಹೆ ಆಂಗಾ ಸಮೆತ್ ಹೊಲೆ ಕಾಯ್ ಆಂಗ್ ನಸ್ತಾನಾಚ್ ಹೊಲೆ ತೆ ಮಾಕಾ ಗೊತ್ತ್ ನಾ; ತೆ ದೆವಾಕುಚ್ ಗೊತ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:2
40 ತಿಳಿವುಗಳ ಹೋಲಿಕೆ  

ಅನಂತರದಲ್ಲಿ ನಾನು ಯೆರೂಸಲೇವಿುಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು.


ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬನು ಕೂತಿದ್ದನು.


ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.


ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಇಳಿದು ಬಂದವನು ಮೇಲಣ ಎಲ್ಲಾ ಲೋಕಗಳಿಗಿಂತ ಉನ್ನತವಾಗಿ ಏರಿಹೋದವನೇ. ಆದದರಿಂದ ಸಮಸ್ತ ಲೋಕಗಳನ್ನು ತುಂಬಿದವನಾದನು.)


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಗುರುತಿರಲಿಲ್ಲ.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.


ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;


ದೇವರಾತ್ಮವು ನನ್ನನ್ನು ಎತ್ತಿ ಒಳಗಣ ಪ್ರಾಕಾರಕ್ಕೆ ತರಲು ಆಹಾ, ಯೆಹೋವನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ.


ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು