2 ಕೊರಿಂಥದವರಿಗೆ 12:20 - ಕನ್ನಡ ಸತ್ಯವೇದವು J.V. (BSI)20 ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಿಯಾ ತುಮ್ಚ್ಯಾಕ್ಡೆ ಯೆತಾನಾ ಮಾಜ್ಯಾ ಮನಾ ಸರ್ಕೆ ತುಮಿ ಹಾಶಿ ಕಾಯ್, ನಾಹೊಲ್ಯಾರ್ ತುಮ್ಚ್ಯಾ ಮನಾ ಸರ್ಕೊ ಮಿಯಾ ಹಾವ್ ಕಾಯ್ ನಾ. ಹೆಚೆ ಮಾಕಾ ಭಿಂಯೆ ದಿಸುಕ್ ಲಾಗ್ಲಾ. ತುಮ್ಚ್ಯಾ ಮದ್ದಿ ಝಗ್ಡೆ, ಎಕಾಮೆಕಾಕ್ ಜಳ್ತಲೆ, ದ್ವೆಶ್, ಸ್ವಾರ್ಥ್, ಚಾಡಿ ಬೊಲ್ತಲೆ, ಪುಸ್ಪುಸುನ್ ಬೊಲ್ತಲೆ, ಗರುಕಿಚಿ ಚಾಲ್ ಅನಿ ಗುಸ್ಪಾ ಗೊಂದಳ್ ಬಗುಕ್ ಗಾವ್ತಾಕಾ ಕಾಯ್ ಮನ್ತಲೆ ಭಿಂಯೆ. ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.