2 ಕೊರಿಂಥದವರಿಗೆ 12:21 - ಕನ್ನಡ ಸತ್ಯವೇದವು J.V. (BSI)21 ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಿಯಾ ತುಮ್ಚ್ಯಾ ಮದ್ದಿ ಯೆಲ್ಲ್ಯಾ ತನ್ನಾ ಮಾಜೊ ದೆವ್ ಮಾಕಾ ಅವ್ಮಾನಾತ್ ಘಾಲಿಲ್ ಕಾಯ್ ಅನಿ ಎಕ್ ಕಾಲಾತ್ ಪಾಪ್ ಕರುನ್ ಹೊತ್ತ್ಯಾ, ಅನಿ ತುಮ್ಚ್ಯೆ ಮದ್ದಿ ಸುಮಾರ್ ಜಾನಾನಿ ಅನಿಬಿ ಬುರ್ಶ್ಯಾ ರಿತಿನ್ ಚಲ್ತಲೆ .ವೆಭಿಚಾರ್ ಅನಿ ಪೊಜ್ಡೆಪಾನ್ ಸೊಡುನ್ ಜಿವನ್ ಬದ್ಲುಕ್ ಪಾವುಕ್ನಾತ್ ಮನುನ್ ರಡ್ತಲೆ ಪಡ್ತಾಕಿ ಕಾಯ್ ಮನುನ್ ಭಿಂಯೆ ದಿಸ್ತಾ. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.