Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:10 - ಕನ್ನಡ ಸತ್ಯವೇದವು J.V. (BSI)

10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:10
11 ತಿಳಿವುಗಳ ಹೋಲಿಕೆ  

ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.


ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.


ಆದಕಾರಣ ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು; ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.


ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.


ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು