Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:11 - ಕನ್ನಡ ಸತ್ಯವೇದವು J.V. (BSI)

11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:11
51 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಯಾವಾಗಲೂ ಸಂತೋಷಿಸಿರಿ; ಎಡೆಬಿಡದೆ ಪ್ರಾರ್ಥನೆಮಾಡಿರಿ;


ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರ್ರಿಯೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಪ್ರಬೋಧಿಸುತ್ತೇನೆ.


ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಆಗಲಿ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಇನ್ನೊಬ್ಬನು ಸಹ - ಸ್ವಾಮೀ, ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿಬರುವದಕ್ಕೆ ನನಗೆ ಅಪ್ಪಣೆಯಾಗಬೇಕು ಅಂದನು.


ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ಅವನ ಅಣ್ಣತಮ್ಮಂದಿರು - ನಮ್ಮ ತಂದೆ ತನ್ನ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಾನೆಂದು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತಾಡಲಾರದೆ ಹೋದರು.


ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.


ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು