2 ಕೊರಿಂಥದವರಿಗೆ 13:3 - ಕನ್ನಡ ಸತ್ಯವೇದವು J.V. (BSI)3 ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಮಾಜ್ಯಾ ವೈನಾ ಕ್ರಿಸ್ತ್ ಬೊಲ್ತಾ ಮನ್ತಲಿ ಖಾತ್ರಿ ತುಮ್ಕಾ ಗಾವ್ತಾ. ತುಮ್ಚ್ಯಾ ವಾಂಗ್ಡಾ ತೊ ಬಳನಸಲ್ಲ್ಯಾ ಸರ್ಕೊ ನ್ಹಯ್, ಖರೆ ಅಮ್ಚ್ಯಾ ಮದ್ದಿ ತೊ ತಾಕ್ತಿಚೊ ಮನುನ್ ದಾಕ್ವುತಾ. ಅಧ್ಯಾಯವನ್ನು ನೋಡಿ |