Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:10 - ಕನ್ನಡ ಸತ್ಯವೇದವು J.V. (BSI)

10 ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ. ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿವಿುತ್ತವೇ ಮನ್ನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ಆ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಯಾರನ್ನಾದರೂ ಕ್ಷಮಿಸಿದರೆ, ನಾನು ಅವರನ್ನು ಕ್ಷಮಿಸುವೆನು. ನಾನು ಯಾರನ್ನಾದರೂ ಕ್ಷಮಿಸಿದರೆ, ನಿಮ್ಮ ನಿಮಿತ್ತವಾಗಿಯೇ ಕ್ರಿಸ್ತ ಯೇಸುವಿನ ಸನ್ನಿಧಾನದಲ್ಲಿ ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನಾಕ್ ತುಮಿ ಮಾಪ್ ಕರ್ತ್ಯಾಶಿ ತೆಕಾ ಮಿಯಾಬಿ ಮಾಪ್ ಕರ್‍ತಾ. ಮಿಯಾ ಜೆ ಖಲೆ ಮಾಪ್ ಕರುಚೆ ಮನುನ್ ಹೊತ್ತೆ ಮಾಪ್ ಕರುನ್ ಹೊಲಾ ಹೊಲ್ಯಾರ್ ತೆ ತುಮ್ಚ್ಯಾಸಾಟ್ನಿ ಕ್ರಿಸ್ತಾಚ್ಯಾ ಇದ್ರಾಕ್ ಮಿಯಾ ಮಾಪ್ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:10
7 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ


ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.


ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀವು ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು