2 ಕೊರಿಂಥದವರಿಗೆ 2:14 - ಕನ್ನಡ ಸತ್ಯವೇದವು J.V. (BSI)14 ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ದೆವಾಕ್ ಧನ್ಯವಾದ್; ತೊ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ಅಪ್ನಾಚ್ಯಾ ಜಿಕೆಚ್ಯಾ ಮೆರ್ವನ್ಗಿತ್ ಚಾಲ್ವುತಾ ಅನಿ ಅಮ್ಚ್ಯಾ ವೈನಾ ಕ್ರಿಸ್ತಾಚ್ಯಾ ವಳ್ಕಿಚಿ ಬರಿ ವಾಸ್ ಸಗ್ಳ್ಯಾಕ್ಡೆ ಫರ್ಗಟಿ ಸಾರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿ |