2 ಕೊರಿಂಥದವರಿಗೆ 2:17 - ಕನ್ನಡ ಸತ್ಯವೇದವು J.V. (BSI)17 ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಲೈ ಲೊಕಾ ಕರ್ತಾತ್ ತಶೆ ಅಮಿ ಕಾಯ್ ದೆವಾಚ್ಯಾ ಗೊಸ್ಟಿಚೊ ಯಾಪಾರ್ ಧಂಧೊ ಕರಿನಾವ್. ದೆವಾನುಚ್ ಅಮ್ಕಾ ಎಚುನ್ ನೆಮಲ್ಲೆ ಹಾಯ್ ಅನಿ ತೆಂಚ್ಯಾ ಇದ್ರಾಕ್ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಮಿ ಖರೆ ಅಸಲ್ಲೆಚ್ ಬೊಲ್ತಾಂವ್. ಅಧ್ಯಾಯವನ್ನು ನೋಡಿ |