Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:9 - ಕನ್ನಡ ಸತ್ಯವೇದವು J.V. (BSI)

9 ಸರ್ವವಿಷಯದಲ್ಲಿಯೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮ ಗುಣವನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಮೊದಲು ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದಿಲ್ಲ್ಯಾ ಸಗ್ಳ್ಯಾ ಸಂಗ್ತಿಯಾ ತುಮಿ ಖಾಲ್ತಿ ಹೊವ್ನ್ ಪಾಳ್ತ್ಯಾಶಿ ಕಾಯ್ ನಾ ಮನುನ್ ತುಮ್ಚಿ ಪರಿಕ್ಷಾ ಕರುಕ್ ಮನುನ್ ಮಿಯಾ ತುಮ್ಕಾ ತಿ ಚಿಟ್ ಲಿವಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:9
15 ತಿಳಿವುಗಳ ಹೋಲಿಕೆ  

ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.


ನನ್ನ ಮಾತನ್ನು ಕೇಳುವಿ ಎಂಬ ಭರವಸವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಆದಕಾರಣ ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನೂ ನಿಮ್ಮನ್ನು ನಾವು ಹೊಗಳಿದ್ದು ನ್ಯಾಯವೆಂಬದನ್ನೂ ಇವರಿಗೂ ಸಭೆಗಳಿಗೂ ತೋರಿಸಿಕೊಡಿರಿ.


ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.


ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.


ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.


ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು