Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:14 - ಕನ್ನಡ ಸತ್ಯವೇದವು J.V. (BSI)

14 ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಂಚಿ ಮನಾ ಧಾಪಲ್ಲಿ ಹೊತ್ತಿ, ಅನಿ ಅಜುನ್ ಪತರ್ ಬಿ ಜುನ್ನೊ ಕರಾರ್ ವಾಚ್ತಾನಾ ತೆಂಚಿ ಮನಾ ಫಾಳಿನಿ ಧಾಪಲ್ಲಿ ರ್‍ಹಾತ್ಯಾತ್, ಖರೆ ಕ್ರಿಸ್ತಾಚ್ಯಾ ವೈನಾ ತಿ ಫಾಳಿ ಉಗ್ಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:14
34 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ; ಅವರ ನಡುವು ಯಾವಾಗಲೂ ಬಳುಕುತ್ತಿರಲಿ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಮತ್ತು ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶೀಯರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವನು.


ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.


ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು