Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಸ್ಲೊಬಿ ಸಂಶೆವ್ ನಸ್ತಾನಾ ತುಮಿಚ್ ಕ್ರಿಸ್ತಾನ್ ಲಿವಲ್ಲಿ ಅನಿ ಅಮ್ಚ್ಯಾ ವೈನಾ ಧಾಡುನ್ ದಿಲ್ಲಿ ಚಿಟಿ; ಶಾಯಿನ್ ಲಿವಲ್ಲಿ ನ್ಹಯ್, ಝಿತ್ತ್ಯಾ ದೆವಾಚ್ಯಾ ಆತ್ಮ್ಯಾನ್ ಗುಂಡ್ಯಾ ವೈನಿ ತೆ ಲಿವಲ್ಲೆ ನಾ, ಖರೆ ಮಾನ್ಸಾಚೆ ಕಾಳಿಜಾರ್ ಲಿವಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:3
35 ತಿಳಿವುಗಳ ಹೋಲಿಕೆ  

ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು, ಅವರ ಮನಸ್ಸಿನ ಮೇಲೆ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ ಎಂಬದಾಗಿ ಹೇಳಿದ ಮೇಲೆ ಇನ್ನು -


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಇಟ್ಟುಕೋ, ಹೃದಯದ ಹಲಗೆಯಲ್ಲಿ ಬರೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು; ಈ ಕಡೆಯೂ ಆ ಕಡೆಯೂ ಬರಹವಿತ್ತು.


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು