2 ಕೊರಿಂಥದವರಿಗೆ 4:4 - ಕನ್ನಡ ಸತ್ಯವೇದವು J.V. (BSI)4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಬರ್‍ಯಾ ಖಬ್ರೆಚೊ ಉಜ್ವೊಡ್ ತೆನಿ ಬಗುಚೆ ನ್ಹಯ್ ಮನುನ್ ಹ್ಯಾ ಜಗಾಚ್ಯಾ ಮೊಟ್ಯಾ ಮುಖಂಡಾನ್ ತೆಂಚಿ ವಿಶ್ವಾಸಾನ್ ನಸಲ್ಲಿ ಮನಾ ಕುಡ್ಡಿ ಕರುನ್ ಥವ್ಲ್ಯಾನಾಯ್, ತಸೆ ಹೊವ್ನ್ ದೆವಾಚೊಚ್ ರುಪ್ ಹೊವ್ನ್ ಅಸಲ್ಲ್ಯಾ ಕ್ರಿಸ್ತಾಚಿ ಮಹಿಮಾ ಬರ್‍ಯಾ ಖಬ್ರೆಚೊ ಪರ್‌ಜಳ್ ಪರ್‍ಚಾರ್ ಹೊಲ್ಲೆ ಬಗುಕ್ ತೆಂಚ್ಯಾನ್ ಹೊಯ್ನಾ. ಅಧ್ಯಾಯವನ್ನು ನೋಡಿ |