2 ಕೊರಿಂಥದವರಿಗೆ 4:7 - ಕನ್ನಡ ಸತ್ಯವೇದವು J.V. (BSI)7 ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಅಶೆ, ಸಾಂಗುಕ್ ಹೊಯ್ನಾ ತಸ್ಲಿ ಪದ್ವಿ ಅಮ್ಚ್ಯಾತ್ನಾ ನ್ಹಯ್, ದೆವಾಕ್ನಾ ಯೆತಾ ಮನುನ್ ದಾಕ್ವುನ್ ದಿವ್‍ಸಾಟಿ ಹೆ ಬದಿಕ್ ಅಮಿ ಮಾಟಿಚ್ಯಾ ಆಯ್ದಾನಾತ್ನಿ ವಾವುನ್ ಘೆವ್ನ್ ಹಾಂವ್. ಅಧ್ಯಾಯವನ್ನು ನೋಡಿ |