2 ಕೊರಿಂಥದವರಿಗೆ 5:11 - ಕನ್ನಡ ಸತ್ಯವೇದವು J.V. (BSI)11 ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಧನಿಯಾಚೆ ಭಿಂಯೆ ಮಟ್ಲ್ಯಾರ್ ಕಾಯ್ ಮನುನ್ ವಳ್ಕುನ್ ಘೆವ್ನ್; ಹೆಚ್ಯಾ ವಿಶಯಾತ್ ದುಸ್ರ್ಯಾಕ್ನಿ ಸಮ್ಜುನ್ ಸಾಂಗುಕ್ ಖಟ್ಪಟ್ ಕರ್ತಾಂವ್, ದೆವಾಕ್ ಅಮ್ಚಿ ಪುರಾ ವಳಕ್ ಹಾಯ್ ಅನಿ ಅಮಿ ಕಸ್ಲೆ ಮನ್ತಲಿ ಸಮ್ಜನ್ ತುಮ್ಚ್ಯಾಬಿ ಭುತ್ತುರ್‍ಲ್ಯಾ ಮನಾತ್ನಿ ತುಮ್ಕಾ ಗಾವ್ಲಾ ಮನುನ್ ಅಮ್ಚೊ ಬರೊಸೊ. ಅಧ್ಯಾಯವನ್ನು ನೋಡಿ |