Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:15 - ಕನ್ನಡ ಸತ್ಯವೇದವು J.V. (BSI)

15 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜಿವನ್ ಕರ್ತಲ್ಯಾನಿ ಹೆಚ್ಯಾ ಫಿಡೆ ಅಪ್ನಾಚ್ಯಾಸಾಟ್ನಿ ಜಿವನ್ ಕರುಚೆ ನ್ಹಯ್, ಖರೆ ಅಪ್ನಾಸಾಟ್ನಿ ಜೊ ಕೊನ್ ಮರ್ಲೊ ಅನಿ ಮಾನಾ ಝಿತ್ತೊ ಹೊಲೊ ತೆಚೆಸಾಟ್ನಿ ಜಿವನ್ ಕರುಕ್ ಪಾಜೆ ಮನುನ್ ತೊ ಸಗ್ಳ್ಯಾಂಚ್ಯಾಸಾಟ್ನಿ ಮರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:15
41 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ದೇವರು ತನ್ನ ಒಬ್ಬನೇ ಮಗನನ್ನು ನಾವು ಆತನ ಮೂಲಕ ಜೀವಿಸುವದಕ್ಕಾಗಿ ಲೋಕಕ್ಕೆ ಕಳುಹಿಸಿಕೊಟ್ಟದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲ ಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನೀವು ಯಾವ ಕೆಲಸವನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ;


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ?


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು.


ಆಗ ಅವನು ಎಲೀಷನಿಗೆ - ನೀನು ನನ್ನದನ್ನು ಸ್ವೀಕರಿಸದಿದ್ದರೆ ನಿನ್ನ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು