Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:5 - ಕನ್ನಡ ಸತ್ಯವೇದವು J.V. (BSI)

5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಉದ್ದೇಶಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು, ಮುಂಬರುವುದರ ಖಾತರಿಯಾಗಿ ನಮಗೆ ತಮ್ಮ ಆತ್ಮವನ್ನೇ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ರಿತಿಚ್ಯಾ ಜಿವನಾಕ್ ದೆವಾನುಚ್ ಅಮ್ಕಾ ತಯಾರ್ ಕರುನ್ ಥವ್ಲಾ ಅನಿ ತೆನಿಚ್ ಹೆಚೊ ಜಾಮಿನ್ ಸಾರ್ಕೆ ಪವಿತ್ರ್ ಆತ್ಮೊ ಅಮ್ಕಾ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:5
11 ತಿಳಿವುಗಳ ಹೋಲಿಕೆ  

ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು