Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:7 - ಕನ್ನಡ ಸತ್ಯವೇದವು J.V. (BSI)

7 ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಅಮಿ ಅಮ್ಚ್ಯಾ ಡೊಳ್ಯಾಂಚ್ಯಾ ದಿಸ್ಟಿನ್ ನ್ಹಯ್, ವಿಶ್ವಾಸಾಚ್ಯಾ ವೈನಾ ಚಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:7
10 ತಿಳಿವುಗಳ ಹೋಲಿಕೆ  

ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು