Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:9 - ಕನ್ನಡ ಸತ್ಯವೇದವು J.V. (BSI)

9 ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಸೆಮನುನ್ ಅಮಿ ಧನಿಯಾಚ್ಯಾ ವಾಂಗ್ಡಾ ರಾಂವ್ದಿತ್, ನಾಹೊಲ್ಯಾರ್ ತೆಚ್ಯಾಕ್ನಾ ಧುರ್ ರ್‍ಹಾಂವ್ದಿತ್, ತೆಚ್ಯಾ ಮನಾ ಸರ್ಕೆ ಚಲ್ತಲೆ ಎಕುಚ್ ಅಮ್ಚೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:9
21 ತಿಳಿವುಗಳ ಹೋಲಿಕೆ  

ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ನೆನಸಿ ಇತರರು ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ಸುವಾರ್ತೆಯನ್ನು ಪ್ರಕಟಿಸುವದಿಲ್ಲವೆಂಬದಾಗಿ ನಿಷ್ಕರ್ಷೆಮಾಡಿಕೊಂಡೆನು.


ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ;


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು