Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಚೊ ಬಾಪ್ ಹೊತಾ ಅನಿ ತುಮಿ ಮಾಜಿ ಪೊರಾ ಹೊತ್ಯಾಶಿ, ಅಶೆ ಮನ್ತಾ ಸರ್ವೆಸ್ವರ್ ದೆವ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:18
21 ತಿಳಿವುಗಳ ಹೋಲಿಕೆ  

ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದುಬಿಟ್ಟ ಹಾಗೆ ಅವನಿಂದ ತೆಗೆಯುವದಿಲ್ಲ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು