Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:9 - ಕನ್ನಡ ಸತ್ಯವೇದವು J.V. (BSI)

9 ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಳಕ್ ನಸಲ್ಲ್ಯಾಂಚ್ಯಾ ಸಾರ್ಕೆ ಅಮ್ಕಾ ಕರ್‍ತ್ಯಾತ್, ಜಾಲ್ಯಾರ್ಬಿ ಅಮಿ ಸಗ್ಳ್ಯಾಕ್ನಿ ವಳ್ಕಿಚೆ, ಅಮಿ ಮರ್ನಾಚ್ಯಾ ಪರಿಸ್ಥಿತಿತ್ ಪಾವಲ್ಲೆ ಸರ್ಕೆ ದಿಸ್ತಾವ್, ಜಾಲ್ಯಾರ್ ಬಿ ಅಮಿ ಝಿತ್ತೆಚ್ ಹಾಂವ್, ಅಮ್ಕಾ ಮಾರುನ್ ಬಡ್ವುಲ್ಯಾನಾತ್ ಜಾಲ್ಯಾರ್ಬಿ ಅಮ್ಚೊ ಜಿವ್ ಕಾಡುನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:9
18 ತಿಳಿವುಗಳ ಹೋಲಿಕೆ  

ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣವಿಧಿ ಹೊಂದಿದವರನ್ನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ದೇವದೂತರಿಗೂ ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ನೋಟವಾದೆವು.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಇವನ ವಿಷಯದಲ್ಲಿ ಮಹಾಸನ್ನಿಧಾನಕ್ಕೆ ಬರೆಯುವದಕ್ಕೆ ನಿಶ್ಚಯವಾದದ್ದೇನೂ ಇಲ್ಲ. ಸೆರೆಯವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ಅವರ ಮತದ ವಿಷಯದಲ್ಲಿಯೂ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. ಆ ಯೇಸು ಜೀವಿತನಾಗಿದ್ದಾನೆಂದು ಪೌಲನು ಹೇಳಿದನು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು