2 ಕೊರಿಂಥದವರಿಗೆ 7:1 - ಕನ್ನಡ ಸತ್ಯವೇದವು J.V. (BSI)1 ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾಜ್ಯಾ ಪ್ರಿತಿಚ್ಯಾ ಭಾವಾ ಅನಿ ಭೆನಿಯಾನು, ಅಸ್ಲಿ ಗೊಸ್ಟಿಯಾ ಅಮ್ಕಾ ಗಾವಲ್ಲಿ ಹಾತ್ ತಸೆಮನುನ್ ಆಂಗ್ ಅನಿ ಆತ್ಮ್ಯಾಚ್ಯಾ ಸಗ್ಳ್ಯಾ ಬುರ್ಶೆಪಾನಾತ್ನಾ ಅಮಿ ಅಮ್ಕಾಚ್ ಪವಿತ್ರ್ ಕರುನ್ ಘೆವ್ವಾ, ಅನಿ ದೆವಾಚ್ಯಾ ಭಿಂಯಾನ್ ಅಮಿ ಅಮ್ಕಾಚ್ ಒಪ್ಸುನ್ ದಿಲ್ಲೆ ಪುರಾ ಕರುವಾ. ಅಧ್ಯಾಯವನ್ನು ನೋಡಿ |