2 ಕೊರಿಂಥದವರಿಗೆ 7:11 - ಕನ್ನಡ ಸತ್ಯವೇದವು J.V. (BSI)11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಬಗಾ ತುಮಿ ದೆವಾಚ್ಯಾ ಇಚ್ಚಾ ಪರ್ಕಾರ್ ದುಖ್ ಸೊಸಲ್ಲ್ಯಾಕ್ ಕಾಯ್ ಸಗ್ಳೆ ಪ್ರತಿ ಫಳ್ ತುಮ್ಕಾ ಗಾವ್ಲಾ, ಕವ್ಡಿ ಉಮ್ಮೆದ್ ತುಮ್ಚ್ಯಾ ಮದ್ದಿ ಭರ್ಲಾ! ತುಮಿ ಚುಕೆತ್ ನಸಲ್ಲೆ ಮನುನ್ ದಾಕ್ವುಕ್ ಕವ್ಡೆ ಬಗುಲ್ಯಾಶಿ, ಕಸ್ಲೊ ಸಂತಾಪ್, ಕಸ್ಲೆ ಭಿಂಯೆ, ಅನಿ ಕಸ್ಲಿ ಉರ್ಬಾ, ನ್ಯಾಯ್‍ನಿತ್ ಹುರಿ ಸರ್ಕೆ ಕರುನ್ ತುಮಿ ಚುಕೆತ್ ನಾಶಿ ಮನುನ್ ತುಮಿ ದಾಕ್ವುನ್ ದಿಲ್ಯಾಶಿ. ಅಧ್ಯಾಯವನ್ನು ನೋಡಿ |