Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:13 - ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸಮಾದಾನ್ ಸಾಂಗ್ತಲ್ಯಾಚ್ಯಾ ಭಾಯ್ರ್, ತಿತಾಚಿ ಕುಶಿ ಬಗುನ್ ಅಮ್ಚಿ ಕುಶಿ ದೊನ್‍ಪಟ್ ಹೊಲಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳ್ಯಾನಿಬಿ ತಿತಾಚ್ಯಾ ಮನಾಕ್ ಸಮಾದಾನ್ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:13
16 ತಿಳಿವುಗಳ ಹೋಲಿಕೆ  

ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದಲಾಗುವದು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವ ಹಾಗೆ ಮಾಡು; ಕ್ರಿಸ್ತನಲ್ಲಿ ನನ್ನ ಹೃದಯವನ್ನು ಸಂತೋಷಪಡಿಸು.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ಆದದರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡಬೇಕೆಂತಲೂ ನನಗೆ ಕೂಡ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಹೆಚ್ಚಾದ ಅವಸರದಿಂದ ಕಳುಹಿಸಿದ್ದೇನೆ.


ನೀವು ಮನೋಭೀತಿಯಿಂದ ನಡುಗುವವರಾಗಿ ಅವನನ್ನು ಸೇರಿಸಿಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯು ತೋರಬಂತು. ಅವನು ಅದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಕನಿಕರವು ಹೆಚ್ಚಾಗಿದೆ.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು