Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:6 - ಕನ್ನಡ ಸತ್ಯವೇದವು J.V. (BSI)

6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಧೈರ್ ಚುಕಲ್ಲ್ಯಾಕ್ನಿ ಬಳ್ ದಿತಲ್ಯಾ ದೆವಾನ್, ತಿತಾಚ್ಯಾ ಯೆನ್ಯಾಚ್ಯಾ ವೈನಾ ಅಮ್ಕಾ ಸಮಾದಾನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:6
20 ತಿಳಿವುಗಳ ಹೋಲಿಕೆ  

ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.


ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು