Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:8 - ಕನ್ನಡ ಸತ್ಯವೇದವು J.V. (BSI)

8 ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಬರೆದಿದ್ದ ಪತ್ರದಿಂದ ನಿಮಗೆ ದುಃಖವಾಗಿದ್ದಲ್ಲಿ, ನಾನು ಅದಕ್ಕೆ ಬೇಸರಪಡುವುದಿಲ್ಲ. ನನ್ನ ಪತ್ರದಿಂದ ನಿಮಗೆ ದುಃಖವಾಯಿತಲ್ಲಾ ಎಂದು ಸ್ವಲ್ಪಕಾಲ ನಾನು ನೊಂದುಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಜ್ಯಾ ಚಿಟಿ ವೈನಾ ಮಿಯಾ ತುಮ್ಕಾ ದುಕ್ವುಲೊ, ಜಾಲ್ಯಾರ್ಬಿ ತ್ಯಾತುರ್ ಮಾಕಾ ಕಾಯ್ ಬೆಜಾರ್ ನಾ. ತ್ಯಾ ಚಿಟಿಕ್ ಲಾಗುನ್ ಎಕ್‍ ಉಲ್ಲ್ಯಾ ಎಳಾಕ್ ತರ್ ಬಿ ಮಿಯಾ ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಚಿಂತುನ್ ಮಾಕಾಬಿ ಬೆಜಾರ್ ಹೊಲೊ. ಜಾಲ್ಯಾರ್ಬಿ ಅತ್ತಾ ಮಿಯಾ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:8
15 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;


ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.


ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಬೇರೆ ಮನಸ್ಸನ್ನು ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನವ್ಮಿುಂದ ಯಾವದರಲ್ಲಿಯೂ ನಷ್ಟಪಡಲಿಲ್ಲವಲ್ಲಾ.


ನಾನು ನಿಮಗೆ ಬರೆದಾಗ ಅನ್ಯಾಯಮಾಡಿದವನಿಗೆ ದಂಡನೆಯೂ ಅನ್ಯಾಯಹೊಂದಿದವನಿಗೆ ನ್ಯಾಯವೂ ಆಗಬೇಕೆಂಬುವ ಕಾರಣದಿಂದ ಬರೆಯಲಿಲ್ಲ; ನಮಗೋಸ್ಕರ ನಿಮಗಿರುವ ಆಸಕ್ತಿಯು ದೇವರ ಮುಂದೆ ನಿಮಗೆ ವ್ಯಕ್ತವಾಗಬೇಕೆಂಬುವ ಉದ್ದೇಶದಿಂದಲೇ ಬರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು