Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:9 - ಕನ್ನಡ ಸತ್ಯವೇದವು J.V. (BSI)

9 ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಬೇರೆ ಮನಸ್ಸನ್ನು ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನವ್ಮಿುಂದ ಯಾವದರಲ್ಲಿಯೂ ನಷ್ಟಪಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗ ನಾನು ಸಂತೋಷವಾಗಿದ್ದೇನೆ. ನಿಮ್ಮನ್ನು ದುಃಖಿತರನ್ನಾಗಿ ಮಾಡಿದ್ದಕ್ಕಾಗಿ ನಾನು ದುಃಖಿಸುತ್ತಿಲ್ಲ. ಆದರೆ ನಿಮ್ಮ ದುಃಖವು ನಿಮ್ಮ ಹೃದಯಗಳಲ್ಲಿ ಪರಿವರ್ತನೆಯನ್ನು ಉಂಟುಮಾಡಿದ್ದರಿಂದ ನಾನು ಸಂತೋಷವಾಗಿದ್ದೇನೆ. ದೇವರ ಇಚ್ಫೆಗನುಸಾರವಾಗಿ ನೀವು ದುಃಖಿತರಾದಿರಿ. ಆದ್ದರಿಂದ ನಮ್ಮಿಂದ ನಿಮಗೆ ಯಾವ ರೀತಿಯಲ್ಲಿಯೂ ನೋವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಮಿಯಾ ಕುಶಿ ನಾವ್, ಖರೆ ತುಮ್ಚ್ಯಾ ಬೆಜಾರಾನ್ ತುಮ್ಚೆ ಜಿವನ್ ಬದಲ್ಲ್ಯಾನ್ ಮನುನ್ ಮಾಕಾ ಕುಶಿ. ತುಮ್ಕಾ ಗಾವಲ್ಲೊ ಬೆಜಾರ್ ದೆವಾಚ್ಯಾ ಇಚ್ಚಾ ಸರ್ಕೆಚ್ ಮನುನ್ ಹೊತಾ. ತಶೆ ಮನುನ್ ಅಮ್ಚ್ಯಾ ವೈನಾ ತುಮ್ಕಾ ಕಾಯ್ಬಿ ಲುಕ್ಷಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:9
18 ತಿಳಿವುಗಳ ಹೋಲಿಕೆ  

ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ನಗೆಗಿಂತ ಕರಕರೆಯು ವಾಸಿ; ಮುಖವು ಸಪ್ಪೆಗಿರುವಲ್ಲಿ ಹೃದಯಕ್ಕೆ ಮೇಲು.


ನಾನು ಅಪರಾಧಿಯೇ ಹೌದೆಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು