Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:5 - ಕನ್ನಡ ಸತ್ಯವೇದವು J.V. (BSI)

5 ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಅಮಿ ಚಿಂತುಕ್ ಸೈತ್ ನಸಲ್ಲಾಂವ್ ತವ್ಡೆ ತೆನಿ ಕರ್‍ಲ್ಯಾನಿ. ಅದ್ದಿ ಅಪ್ನಾಕುಚ್ ದೆವಾಚ್ಯಾ ಚಾಕ್ರಿ ಕರ್‍ತಲ್ಯಾತ್ ತೆನಿ ಒಪ್ಸುನ್ ದಿಲ್ಯಾನಿ ಅನಿ ಮಾನಾ ದೆವಾಚ್ಯಾ ಇಚ್ಚ್ಯಾ ಪರ್ಕಾರ್ ಅಮ್ಚ್ಯಾ ಸೆವೆಕ್ ತೆನಿ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:5
15 ತಿಳಿವುಗಳ ಹೋಲಿಕೆ  

ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ.


ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು