Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:9 - ಕನ್ನಡ ಸತ್ಯವೇದವು J.V. (BSI)

9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:9
43 ತಿಳಿವುಗಳ ಹೋಲಿಕೆ  

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ಆತನು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿವಿುತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.


ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಮೊದಲನೆಯ ಮನುಷ್ಯನು ಭೂವಿುಯೊಳಗಿಂದ ಉತ್ಪನ್ನನಾಗಿ ಮಣ್ಣಿಗೆ ಸಂಬಂಧಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಅವರು ಬಿದ್ದುಹೋದದ್ದು ಸರ್ವಲೋಕದ ಭಾಗ್ಯಕ್ಕೂ ಅವರು ಸೋತು ಹೋದದ್ದು ಅನ್ಯಜನಗಳ ಭಾಗ್ಯಕ್ಕೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಎಷ್ಟೋ ಹೆಚ್ಚಾಗಿ ಭಾಗ್ಯಕ್ಕೆ ಕಾರಣವಾಗುವದು.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ಆದರೆ ಯೇಸು ಅವರಿಗೆ - ಈ ಆಕಾಶವಾಣಿ ನನಗಾಗಿ ಆಗಲಿಲ್ಲ; ನಿಮಗಾಗಿ ಆಯಿತು.


ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು