2 ಕೊರಿಂಥದವರಿಗೆ 9:10 - ಕನ್ನಡ ಸತ್ಯವೇದವು J.V. (BSI)10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪೆರ್‍ತಲ್ಯಾಕ್ ಬಿಂಯ್ ಅನಿ ಖಾತಲ್ಯಾಕ್ ಭಾಕ್ರಿ ಗಾವಿ ಸರ್ಕೆ ಕರ್‍ತಾ ತೊ ದೆವ್ ಭರ್ಪುರ್ ಮಾಪಾನ್ ತುಮ್ಚ್ಯಾ ಬಿಯಾಳಾಕ್‍ಬಿ ಚೆಡ್ವುತಾ ಅನಿ ತುಮ್ಚ್ಯಾ ದಾನಾಚೊ ಪಳ್ ಜಾಸ್ತಿ ವಾಡ್ವುತಾ. ಅಧ್ಯಾಯವನ್ನು ನೋಡಿ |