Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:13 - ಕನ್ನಡ ಸತ್ಯವೇದವು J.V. (BSI)

13 ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಪ್ರೆಮಾಚ್ಯಾ ಸೆವೆಚ್ಯಾ ವೈನಾ ತುಮ್ಚೊ ವಿಶ್ವಾಸ್ ಕಸ್ಲೊ ಮನುನ್ ತುಮಿ ದಾಕ್ವುನ್ ದಿತ್ಯಾಶಿ. ಮಟ್ಲ್ಯಾರ್ ಕ್ರಿಸ್ತಾಚಿ ಬರಿ ಖಬರ್ ತುಮಿ ಮಾನುನ್ ಘೆತ್ಯಾಶಿ, ತಶೆಚ್ ಪಾಳ್ತಾಶಿ ಮನುನ್ ಅನಿ ತುಮ್ಚ್ಯಾಕ್ಡೆ ಕಾಯ್ ಹಾಯ್ ತೆ ತೆಂಕಾಬಿ ಅನಿ ದುಸ್ರ್ಯಾಕ್ನಿಬಿ ಸಗ್ಳ್ಯಾ ಮನಾನ್ ತುಮಿ ವಾಟುನ್ ದಿತ್ಯಾಶಿ ಮನುನ್ ಕಳ್ವುನ್ ಘೆವ್ನ್ ದೆವಾಕ್ ಧನ್ಯವಾದ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:13
27 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಸುದ್ದಿಯನ್ನು ಮಾತ್ರ ಅವರು ಕೇಳಿ ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.


ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು


ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.


ಇದಲ್ಲದೆ ನೀವು ನನ್ನನ್ನು ಸ್ವಾಮೀ ಸ್ವಾಮೀ ಅಂತ ಕರೆದು ನಾನು ಹೇಳುವದನ್ನು ನಡಿಸದೆ ಇರುವದೇಕೆ?


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆಮಾಡಿ ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿ ಇರುವದರಿಂದ ನಿಮ್ಮ ಪರಿಚಿತಿಮಾಡಬೇಕೆಂದು ಕೋರುವರು.


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು