Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಸ್ವಲ್ಪವಾಗಿ ಬಿತ್ತುವವನು ಪೈರನ್ನು ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಸ್ವಲ್ಪ ಬಿತ್ತುವವನು ಕೇವಲ ಸ್ವಲ್ಪವನ್ನೇ ಕೊಯ್ಯುವನು, ಆದರೆ ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸ್ವಲ್ಪವಾಗಿ ಬಿತ್ತುವವನು ಸ್ವಲ್ಪವಾಗಿ ಕೊಯ್ಯುವನು, ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎವ್ಡೆ ಮನಾತ್ ಥವ್ನ್ ಘೆವಾ, ಜೊ ಕೊನ್ ಉಲ್ಲೆಸೆಚ್ ಪೆರ್ತಾ ತೊ ಉಲ್ಲೆಸೆಚ್ ಕಾತರ್‍ತಾ, ಜೊ ಕೊನ್ ಲೈ ಪೆರ್ತಾ, ತೊ ಲೈ ಕಾತರ್‍ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:6
20 ತಿಳಿವುಗಳ ಹೋಲಿಕೆ  

ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.


ನಾನು ಹೇಳುವದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವದಿಲ್ಲ.


ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದೇ ಇದ್ದಾನೆ; ನಿದ್ರೆಹೋದವರಲ್ಲಿ ಪ್ರಥಮಫಲವಾದನು.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂಬ ಭಯ ನನಗಿರುವದರಿಂದ ಇದನ್ನು ಹೇಳಿದ್ದೇನೆ.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು