Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:10 - ಕನ್ನಡ ಸತ್ಯವೇದವು J.V. (BSI)

10 ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಅತ್ತಾ ಅಮ್ಕಾ ಸುಟ್ಕಾ ದಿನಾರೊ ಜೆಜು ಕ್ರಿಸ್ತ್ ಯೆಲ್ಲ್ಯಾಚ್ಯಾ ವೈನಾ ತೆಚಿ ಕುರ್ಪಾ ಮಾಳಾಕ್ ಯೆಲಾ. ತೆನಿ ಮರ್ನಾಚ್ಯಾ ಬಳಾಚೊ ನಾಸ್ ಕರ್‍ಲ್ಯಾನ್ ಅನಿ ಬರ್‍ಯಾ ಖಬ್ರೆ ವೈನಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ತೆನಿ ಅಮ್ಕಾ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:10
58 ತಿಳಿವುಗಳ ಹೋಲಿಕೆ  

ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಕ್ರಿಸ್ತ ಯೇಸುವಿನಲ್ಲಿರುವ ಜೀವವಾಗ್ದಾನವನ್ನು ತಿಳಿಯಪಡಿಸುವದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಇದಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂವಿುಗೆ ಪ್ರಕಾಶವುಂಟಾಯಿತು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಹೀಗಿರಲಾಗಿ ನೀವು ಜ್ಞಾನಪ್ರಕಾಶದಲ್ಲಿ ಸೇರಿ ಕಷ್ಟಾನುಭವವೆಂಬ ಬಲು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ;


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಜನೋಪಕಾರವೂ ಪ್ರತ್ಯಕ್ಷವಾದಾಗ


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.


ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ.


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು.


ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು